Skip to content
Opens in a new window
Listen to this chapter • 6:14

[1] ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.

[2] ಇದಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರಮಾಡಿದನು.

[3] ಲೇವಿಯರು ಮೂವತ್ತು ವರ್ಷ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅವರ ಪುರುಷರ ಲೆಕ್ಕವು ಮೂವತ್ತೆಂಟು ಸಾವಿರವಾಗಿತ್ತು.

[4] ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.

[5] ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”

[6] ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.

[7] ಗೇರ್ಷೋನ್ಯರಲ್ಲಿ, ಲದ್ದಾನ್ ಮತ್ತು ಶಿಮ್ಮೀ.

[8] ಲದ್ದಾನನ ಪುತ್ರರು: ಮೊದಲನೆಯವನು ಯೆಹೀಯೇಲ್, ಜೇತಾಮ್, ಯೋಯೇಲ್ ಎಂಬ ಮೂರು ಮಕ್ಕಳಿದ್ದರು.

[9] ಶಿಮ್ಮೀಯ ಪುತ್ರರು: ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿಯು. ಇವರು ಲದ್ದಾನನ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು.

[10] ಶಿಮ್ಮೀಯ ಪುತ್ರರು: ಯಹತ್, ಜೀನ, ಯೆಯೂಷ್, ಬೆರೀಯ ಶಿಮ್ಮನ ಈ ನಾಲ್ಕು ಮಂದಿ ಪುತ್ರರಲ್ಲಿ

[11] ಯಹತನು ಮೊದಲನೆಯವನು, ಜೀಜನು ಎರಡನೆಯವನಾಗಿದ್ದನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳು ಇಲ್ಲದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಕೆಯಾಗಿದ್ದರು.

[12] ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.

[13] ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.

[14] ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.

[15] ಮೋಶೆಯ ಪುತ್ರರು: ಗೇರ್ಷೋಮ್ ಮತ್ತು ಎಲೀಯೆಜೆರ್.

[16] ಗೇರ್ಷೋಮನ ಪುತ್ರರಲ್ಲಿ ಶೆಬೂಯೇಲನು ಮೊದಲನೆಯವನಾಗಿದ್ದನು.

[17] ಎಲೀಯೆಜೆರನ ಪುತ್ರರು: ಮೊದಲನೆಯವನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಪುತ್ರರಿಲ್ಲ; ಆದರೆ ರೆಹಬ್ಯನ ಪುತ್ರರು ಬಹಳ ಮಂದಿ ಇದ್ದರು.

[18] ಇಚ್ಹಾರನ ಪುತ್ರರಲ್ಲಿ ಶೆಲೋಮೋತನು ಮೊದಲನೆಯವನಾಗಿದ್ದನು.

[19] ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

[20] ಉಜ್ಜೀಯೇಲನ ಪುತ್ರರಲ್ಲಿ ಮೀಕನು ಮೊದಲನೆಯವನು, ಇಷೀಯನು ಎರಡನೆಯವನು.

[21] ಮೆರಾರೀಯ ಪುತ್ರರು: ಮಹ್ಲೀ ಮತ್ತು ಮೂಷೀ. ಮಹ್ಲೀಯ ಪುತ್ರರು: ಎಲಿಯಾಜರ್ ಮತ್ತು ಕೀಷ್.

[22] ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು.

[23] ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೇಮೋತ್ ಎಂಬ ಈ ಮೂರು ಮಂದಿ.

[24] ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.

[25] ದಾವೀದನು, “ಇಸ್ರಾಯೇಲಿನ ದೇವರಾದ ಯೆಹೋವ ದೇವರು, ಅವರು ಯುಗಯುಗಾಂತರಕ್ಕೂ ಯೆರೂಸಲೇಮಿನಲ್ಲಿ ವಾಸಿಸುವ ಹಾಗೆ ತಮ್ಮ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದು ಹೇಳಿ,

[26] ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

[27] ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.

[28] ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,

[29] ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.

[30] ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,

[31] ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.

[32] ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.

1 ಪೂರ್ವಕಾಲ ವೃತ್ತಾಂತ — Chapters