[1] ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.
[2] ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.
[3] ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
[4] ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.
[5] ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.
[6] ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು.
[7] ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ,
[8] ಮೂರನೆಯದು ಹಾರಿಮನಿಗೆ; ನಾಲ್ಕನೆಯದು ಸೆಯೋರೀಮನಿಗೆ;
[9] ಐದನೆಯದು ಮಲ್ಕೀಯನಿಗೆ; ಆರನೆಯದು ಮಿಯಾಮಿನನಿಗೆ;
[10] ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;
[11] ಒಂಬತ್ತನೆಯದು ಯೆಷೂವನಿಗೆ; ಹತ್ತನೆಯದು ಶೇಕನ್ಯನಿಗೆ;
[12] ಹನ್ನೊಂದನೆಯದು ಎಲ್ಯಾಷೀಬನಿಗೆ; ಹನ್ನೆರಡನೆಯದು ಯಾಕೀಮನಿಗೆ,
[13] ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಯೆಷೆಬಾಬನಿಗೆ;
[14] ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;
[15] ಹದಿನೇಳನೆಯದು ಹೇಜೀರನಿಗೆ; ಹದಿನೆಂಟನೆಯದು ಹಪಿಚ್ಚೇಚನಿಗೆ;
[16] ಹತ್ತೊಂಬತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ;
[17] ಇಪ್ಪತ್ತೊಂದನೆಯದು ಯಾಕೀನನಿಗೆ; ಇಪ್ಪತ್ತೆರಡನೆಯದು ಗಾಮೂಲನಿಗೆ;
[18] ಇಪ್ಪತ್ಮೂರನೆಯದು ದೆಲಾಯನಿಗೆ; ಇಪ್ಪತ್ನಾಲ್ಕನೆಯದು ಮಾಜ್ಯನಿಗೆ.
[19] ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.
[20] ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.
[21] ರೆಹಬ್ಯನನ್ನು ಕುರಿತು: ರೆಹಬ್ಯನ ಪುತ್ರರಲ್ಲಿ ಇಷೀಯನು ಮೊದಲನೆಯವನು.
[22] ಇಚ್ಹಾರರಲ್ಲಿ ಶೆಲೋಮೋತನು ಮೊದಲನೆಯವನು. ಶೆಲೋಮೋತನ ಪುತ್ರರಲ್ಲಿ ಯಹತನು.
[23] ಹೆಬ್ರೋನನ ಪುತ್ರರಲ್ಲಿ ಯೆರೀಯನು ಮೊದಲನೆಯವನು; ಎರಡನೆಯವನು ಅಮರ್ಯ; ಮೂರನೆಯವನು ಯಹಜಿಯೇಲ್; ನಾಲ್ಕನೆಯವನು ಯೆಕಮ್ಮಾಮ್.
[24] ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು.
[25] ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.
[26] ಮೆರಾರೀಯ ಪುತ್ರರಲ್ಲಿ ಮಹ್ಲೀ, ಮೂಷೀ; ಯಾಜ್ಯನ ಮಗನು ಬೆನೋನು.
[27] ಮೆರಾರೀಯ ಪುತ್ರರಲ್ಲಿ ಯಾಜ್ಯನಿಗೆ ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಎಂಬ ಪುತ್ರರಿದ್ದರು.
[28] ಮಹ್ಲೀಯನಿಗೆ ಎಲಿಯಾಜರನು ಹುಟ್ಟಿದನು; ಎಲಿಯಾಜರನಿಗೆ ಪುತ್ರರಿರಲಿಲ್ಲ.
[29] ಕೀಷನಿಂದ ಯೆರಹ್ಮೇಲನು.
[30] ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೀಮೋತ್. ಇವರು ತಮ್ಮ ಕುಟುಂಬಗಳ ಪ್ರಕಾರ ಲೇವಿಯರ ಪುತ್ರರಾಗಿದ್ದರು.
[31] ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.