[1] ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,
[2] ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.
[3] ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು.
[4] ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
[5] ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.
[6] ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್,
[7] ನೋಗಹ, ನೆಫೆಗ್, ಯಾಫೀಯ,
[8] ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು.
[9] ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.
[10] ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು;
[11] ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.
[12] ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
[13] ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
[14] ಇವನ ಮಗನು ಆಮೋನನು; ಇವನ ಮಗನು ಯೋಷೀಯನು.
[15] ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.
[16] ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.
[17] ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,
[18] ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
[19] ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.
[20] ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್
[21] ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
[22] ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.
[23] ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.
[24] ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.