Skip to content
Opens in a new window
Listen to this chapter • 0:51

[1] ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

[2] ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.

[3] ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

ಎಸ್ತೇರಳು — Chapters