[1] ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.
[2] ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.
[3] ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.
[4] ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.
[5] ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
[6] ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.
[7] ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು.
[8] ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.
[9] ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.
[10] ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.
[11] ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.
[12] ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು.
[13] ಆದರೆ ಜನರು ಅನೇಕರು. ಇದು ಮಳೆಗಾಲವಾಗಿರುವುದರಿಂದ ಹೊರಗೆ ಇರಲಾರೆವು. ಇದಲ್ಲದೆ ಇದು ಒಂದೆರಡು ದಿನಗಳ ಕೆಲಸವಲ್ಲ. ಏಕೆಂದರೆ ಈ ಕಾರ್ಯದಲ್ಲಿ ನಮ್ಮ ಅಪರಾಧವು ದೊಡ್ಡದು.
[14] ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.
[15] ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು.
[16] ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.
[17] ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು.
[18] ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.
[19] ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.
[20] ಇಮ್ಮೇರನ ವಂಶಜರಲ್ಲಿ: ಹನಾನೀ, ಜೆಬದ್ಯ.
[21] ಹಾರಿಮನ ವಂಶಜರಲ್ಲಿ: ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.
[22] ಪಷ್ಹೂರನ ವಂಶಜರಲ್ಲಿ: ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೆಯೇಲ್, ಯೋಜಾಬಾದ್ ಮತ್ತು ಎಲ್ಲಾಸ.
[23] ಲೇವಿಯರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್.
[24] ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.
[25] ಇಸ್ರಾಯೇಲರಲ್ಲಿ: ಪರೋಷನ ವಂಶಜರಲ್ಲಿ: ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯಾಮಿನ್, ಎಲಿಯಾಜರ್, ಮಲ್ಕೀಯ, ಬೆನಾಯ.
[26] ಏಲಾಮನ ವಂಶಜರಲ್ಲಿ: ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೀಮೋತ್, ಎಲೀಯ.
[27] ಜತ್ತೂ ವಂಶಜರಲ್ಲಿ: ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೀಮೋತ್, ಜಾಬಾದ್ ಮತ್ತು ಅಜೀಜಾ.
[28] ಬೇಬೈನ ವಂಶಜರಲ್ಲಿ: ಯೆಹೋಹಾನಾನ್, ಹನನ್ಯ, ಜಬ್ಬೈ, ಅತ್ಲೈ.
[29] ಬಾನೀ ವಂಶಜರಲ್ಲಿ: ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
[30] ಪಹತ್ ಮೋವಾಬಿನ ವಂಶಜರಲ್ಲಿ: ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲಯೇಲ್, ಬಿನ್ನೂಯ್, ಮನಸ್ಸೆ.
[31] ಹಾರಿಮನ ವಂಶಜರಲ್ಲಿ: ಎಲೀಯೆಜೆರ್, ಇಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,
[32] ಬೆನ್ಯಾಮೀನ್, ಮಲ್ಲೂಕ್, ಶೆಮರ್ಯ.
[33] ಹಾಷುಮ್ ವಂಶಜರಲ್ಲಿ: ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿಮ್ಮೀ.
[34] ಬಾನೀ ವಂಶಜರಲ್ಲಿ: ಮಾದೈ, ಅಮ್ರಾಮ್, ಉಯೇಲ್,
[35] ಬೆನಾಯ, ಬೇದೆಯ, ಕೆಲೂಹಿ.
[36] ವನ್ಯಾಹ, ಮೆರೇಮೋತ್, ಎಲ್ಯಾಷೀಬ್,
[37] ಮತ್ತನ್ಯ, ಮತ್ತೆನೈ, ಯಾಸೈ.
[38] ಬಾನೀ, ಬಿನ್ನೂಯ್ ವಂಶಜರಲ್ಲಿ: ಶಿಮ್ಮೀ,
[39] ಶೆಲೆಮ್ಯ, ನಾತಾನ್, ಅದಾಯ,
[40] ಮಕ್ನದೆಬೈ, ಶಾಷೈ, ಶಾರೈ,
[41] ಅಜರಯೇಲ್, ಶೆಲೆಮ್ಯ, ಶೆಮರ್ಯ,
[42] ಶಲ್ಲೂಮ್, ಅಮರ್ಯ, ಯೋಸೇಫ್.
[43] ನೆಬೋ ವಂಶಜರಲ್ಲಿ: ಯೆಹಿಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋಯೇಲ್ ಮತ್ತು ಬೆನಾಯ.
[44] ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.