Skip to content
Opens in a new window
Listen to this chapter • 7:36

[1] ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ

[2] ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

[3] ಪರೋಷನ ವಂಶಜರು 2,172

[4] ಶೆಫಟ್ಯನ ವಂಶಜರು 372

[5] ಆರಹನ ವಂಶಜರು 775

[6] ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812

[7] ಏಲಾಮನ ವಂಶಜರು 1,254

[8] ಜತ್ತೂವಿನ ವಂಶಜರು 945

[9] ಜಕ್ಕೈನ ವಂಶಜರು 760

[10] ಬಾನೀಯ ವಂಶಜರು 642

[11] ಬೇಬೈನ ವಂಶಜರು 623

[12] ಅಜ್ಗಾದನ ವಂಶಜರು 1,222

[13] ಅದೋನೀಕಾಮಿನ ವಂಶಜರು 666

[14] ಬಿಗ್ವೈ ವಂಶಜರು 2,056

[15] ಅದೀನನ ವಂಶಜರು 454

[16] ಹಿಜ್ಕೀಯನ ಮಗನಾದ ಆಟೇರ್ ವಂಶಜರು 98

[17] ಬೇಚೈಯ ವಂಶಜರು 323

[18] ಯೋರನ ವಂಶಜರು 112

[19] ಹಾಷುಮನ ವಂಶಜರು 223

[20] ಗಿಬ್ಬಾರನ ವಂಶಜರು 95

[21] ಬೇತ್ಲೆಹೇಮನ ವಂಶಜರು 123

[22] ನೆಟೋಫದ ಜನರು 56

[23] ಅನಾತೋತ್ ಊರಿನವರು 128

[24] ಅಜ್ಮಾವೆತಿನವರು 42

[25] ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743

[26] ರಾಮಾ ಗೆಬ ಎಂಬ ಪಟ್ಟಣದವರು 621

[27] ಮಿಕ್ಮಾಷದ ಜನರು 122

[28] ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 223

[29] ನೆಬೋ ಊರಿನವರು 52

[30] ಮಗ್ಬೀಷನ ಜನರು 156

[31] ಮತ್ತೊಬ್ಬ ಏಲಾಮನ ವಂಶಜರು 1,254

[32] ಹಾರಿಮನ ವಂಶಜರು 320

[33] ಲೋದ್, ಹಾದೀದ್, ಓನೋ ಎಂಬ ಊರಿನ ಜನರು 725

[34] ಯೆರಿಕೋವಿನ ವಂಶಜರು 345

[35] ಸೆನಾಹನ ವಂಶಜರು 3,630.

[36] ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973

[37] ಇಮ್ಮೇರನ ವಂಶಜರು 1,052

[38] ಪಷ್ಹೂರನ ವಂಶಜರು 1,247

[39] ಹಾರಿಮನ ವಂಶಜರು 1,017.

[40] ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.

[41] ಹಾಡುಗಾರರು: ಆಸಾಫನ ವಂಶಜರು 128.

[42] ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.

[43] ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.

[44] ಕೆರೋಸ್, ಸೀಯಹಾ, ಪದೋನ್,

[45] ಲೆಬಾನ, ಹಗಾಬ, ಅಕ್ಕೂಬ್

[46] ಹಗಾಬ್, ಶಲ್ಮೈ, ಹಾನಾನ್,

[47] ಗಿದ್ದೇಲ್, ಗಹರ್, ರೆವಾಯ,

[48] ರೆಚೀನ್, ನೆಕೋದ, ಗಜ್ಜಾಮ್,

[49] ಉಜ್ಜ, ಪಾಸೇಹ, ಬೇಸೈ,

[50] ಅಸ್ನ, ಮೆಯನೀಮ್, ನೆಫೀಸೀಮ್,

[51] ಬಕ್ಬೂಕ್, ಹಕ್ಕೂಫ, ಹರ್ಹೂರ್,

[52] ಬಚ್ಲೂತ್, ಮೆಹೀದ, ಹರ್ಷ,

[53] ಬರ್ಕೋಸ್, ಸೀಸೆರ, ತೆಮಹ,

[54] ನೆಚೀಹ, ಹಟೀಫ, ಇವರ ವಂಶಜರು.

[55] ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,

[56] ಯಾಲ, ದರ್ಕೋನ್, ಗಿದ್ದೇಲ್,

[57] ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಮತ್ತು ಆಮೀ ಇವರ ವಂಶಜರು.

[58] ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.

[59] ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:

[60] ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 652 ಮಂದಿ.

[61] ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.

[62] ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.

[63] ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.

[64] ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.

[65] ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.

[66] ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,

[67] ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.

[68] ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

[69] ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.

[70] ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

ಎಜ್ರ — Chapters