Skip to content
Opens in a new window
Listen to this chapter • 4:42

[1] ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:

[2] ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.

[3] ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.

[4] ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.

[5] ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.

[6] ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.

[7] ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.

[8] ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.

[9] ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.

[10] ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.

[11] ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ

[12] ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.

[13] ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು

[14] ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,

[15] ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.

[16] ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು

[17] ಹಿವ್ವಿಯರು, ಅರ್ಕಿಯರು, ಸೀನಿಯರು,

[18] ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.

[19] ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.

[20] ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.

[21] ಯೆಫೆತನ ಹಿರಿಯ ಸಹೋದರನೂ ಏಬೆರನ ಮಕ್ಕಳ ಮೂಲಪುರುಷನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.

[22] ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.

[23] ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.

[24] ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ,

[25] ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.

[26] ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,

[27] ಹದೋರಾಮ್, ಊಜಾಲ್, ದಿಕ್ಲಾ,

[28] ಓಬಾಲ್, ಅಬೀಮಯೇಲ್, ಶೆಬಾ,

[29] ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.

[30] ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.

[31] ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು.

[32] ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.

ಆದಿಕಾಂಡ — Chapters