Skip to content
Opens in a new window
Listen to this chapter • 6:58

[1] ಎದೋಮ್ ಎಂಬ ಏಸಾವನ ವಂಶಾವಳಿ ಇದು:

[2] ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,

[3] ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋದರಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.

[4] ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.

[5] ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.

[6] ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಪುತ್ರಪುತ್ರಿಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು, ತನ್ನ ಸಹೋದರನಾದ ಯಾಕೋಬನ ಬಳಿಯಿಂದ ಸ್ವಲ್ಪ ದೂರವಿದ್ದ ಮತ್ತೊಂದು ಊರಿಗೆ ಹೋದನು.

[7] ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

[8] ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.

[9] ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:

[10] ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.

[11] ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.

[12] ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.

[13] ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.

[14] ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.

[15] ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,

[16] ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.

[17] ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.

[18] ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.

[19] ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.

[20] ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

[21] ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.

[22] ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.

[23] ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್.

[24] ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.

[25] ಅನಾಹನ ಮಕ್ಕಳು ಯಾರೆಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.

[26] ದೀಶೋನನ ಮಕ್ಕಳು ಯಾರೆಂದರೆ: ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.

[27] ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್.

[28] ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.

[29] ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,

[30] ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.

[31] ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.

[32] ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.

[33] ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.

[34] ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.

[35] ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.

[36] ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.

[37] ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.

[38] ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.

[39] ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

[40] ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,

[41] ಒಹೊಲೀಬಾಮ, ಏಲಾ, ಪೀನೋನ್,

[42] ಕೆನಜ್, ತೇಮಾನ್, ಮಿಬ್ಜಾರ,

[43] ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.

ಆದಿಕಾಂಡ — Chapters