Skip to content
Opens in a new window
Listen to this chapter • 3:05

[1] “ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.

[2] ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.

[3] ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.

[4] ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

[5] ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?

[6] ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.

[7] “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.

[8] ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.

[9] ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.

[10] ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.

[11] “ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.

[12] ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.

[13] ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.

[14] ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”

ಹೋಶೇಯ — Chapters