Skip to content
Opens in a new window
Listen to this chapter • 2:34

[1] ಆಹಾ, ಆಕಾಶಗಳನ್ನು ಹರಿದುಬಿಟ್ಟು ಇಳಿದು ಬಾ! ನಿಮ್ಮ ದರ್ಶನವನ್ನು ಕಂಡು ಪರ್ವತಗಳು ಗಡಗಡನೆ ನಡುಗುವಂತೆಯೂ,

[2] ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು!

[3] ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.

[4] ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.

[5] ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?

[6] ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.

[7] ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.

[8] ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.

[9] ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.

[10] ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.

[11] ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.

[12] ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?

ಯೆಶಾಯ — Chapters