Skip to content
Opens in a new window
Listen to this chapter • 3:47

[1] ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:

[2] ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.

[3] ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.

[4] ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.

[5] ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.

[6] ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.

[7] ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,

[8] ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:

[9] ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು.

[10] ಯೆರೂಸಲೇಮಿನ ಅರಸನು. ಹೆಬ್ರೋನಿನ ಅರಸನು.

[11] ಯರ್ಮೂತಿನ ಅರಸನು. ಲಾಕೀಷಿನ ಅರಸನು.

[12] ಎಗ್ಲೋನಿನ ಅರಸನು. ಗೆಜೆರಿನ ಅರಸನು.

[13] ದೆಬೀರಿನ ಅರಸನು. ಗೆದೆರಿನ ಅರಸನು.

[14] ಹೊರ್ಮಾದ ಅರಸನು. ಅರಾದಿನ ಅರಸನು.

[15] ಲಿಬ್ನದ ಅರಸನು. ಅದುಲ್ಲಾಮಿನ ಅರಸನು.

[16] ಮಕ್ಕೇದದ ಅರಸನು. ಬೇತೇಲಿನ ಅರಸನು.

[17] ತಪ್ಪೂಹದ ಅರಸನು. ಹೇಫೆರಿನ ಅರಸನು.

[18] ಅಫೇಕದ ಅರಸನು. ಲಷ್ಷಾರೋನಿನ ಅರಸನು.

[19] ಮಾದೋನಿನ ಅರಸನು. ಹಾಚೋರಿನ ಅರಸನು.

[20] ಶಿಮ್ರೋನ್ ಮೆರೋನಿನ ಅರಸನು. ಅಕ್ಷಾಫಿನ ಅರಸನು.

[21] ತಾನಕದ ಅರಸನು. ಮೆಗಿದ್ದೋವಿನ ಅರಸನು.

[22] ಕೆದೆಷಿನ ಅರಸನು. ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು.

[23] ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.

[24] ತಿರ್ಚದ ಅರಸನು. ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು.

ಯೆಹೋಶುವ — Chapters