Skip to content
Opens in a new window
Listen to this chapter • 1:06

[1] ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

[2] ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.

[3] ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.

[4] ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.

[5] ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.

[6] ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.

[7] ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.

[8] ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.

ಕೀರ್ತನೆಗಳು — Chapters