Skip to content
Opens in a new window
Listen to this chapter • 1:17

[1] “ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.

[2] ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.

[3] ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.

[4] ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.

[5] ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.

[6] ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.

[7] ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”

[8] ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.

[9] ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.

ಕೀರ್ತನೆಗಳು — Chapters