Skip to content
Opens in a new window
Listen to this chapter • 0:51

[1] ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.

[2] ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.

[3] ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ.

[4] ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.

ಕೀರ್ತನೆಗಳು — Chapters