Skip to content
Opens in a new window
Listen to this chapter • 1:00

[1] ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.

[2] ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.

[3] ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.

[4] ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.

[5] ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;

[6] ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.

ಕೀರ್ತನೆಗಳು — Chapters