Skip to content
Opens in a new window
Listen to this chapter • 1:02

[1] ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.

[2] ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.

[3] ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.

[4] ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.

[5] ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.

ಕೀರ್ತನೆಗಳು — Chapters