Skip to content
Opens in a new window
Listen to this chapter • 1:12

[1] ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?

[2] ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?

[3] ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

[4] “ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.

[5] ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.

[6] ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.

ಕೀರ್ತನೆಗಳು — Chapters