Skip to content
Opens in a new window
Listen to this chapter • 0:59

[1] ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

[2] ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.

[3] ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.

[4] ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.

[5] ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.

[6] ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!

ಕೀರ್ತನೆಗಳು — Chapters