Skip to content
Opens in a new window
Listen to this chapter • 1:49

[1] ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.

[2] ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.

[3] ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.

[4] ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.

[5] ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.

[6] ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.

[7] ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.

[8] ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.

[9] ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.

[10] ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.

[11] ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.

ಕೀರ್ತನೆಗಳು — Chapters