Skip to content
Opens in a new window
Listen to this chapter • 1:12

[1] ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!

[2] “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.

[3] ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.

[4] ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.

[5] ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.

[6] ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.

[7] ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.

[8] ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

ಕೀರ್ತನೆಗಳು — Chapters