Skip to content
Opens in a new window
Listen to this chapter • 1:03

[1] ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.

[2] ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ.

[3] ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.

[4] ನಿಜವಾಗಿಯೂ ದೇವರು ನನ್ನ ಸಹಾಯಕರು. ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು.

[5] ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.

[6] ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು.

[7] ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.

ಕೀರ್ತನೆಗಳು — Chapters