[1] ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.
[2] ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.
[3] ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.
[4] ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.
[5] ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.
[6] ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
[7] ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.
[8] ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”
[9] ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?
[10] ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?
[11] ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.
[12] ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.