Skip to content
Opens in a new window
Listen to this chapter • 1:17

[1] ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.

[2] ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.

[3] ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.

[4] ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

[5] ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.

[6] ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.

[7] ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.

[8] ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.

ಕೀರ್ತನೆಗಳು — Chapters