Skip to content
Opens in a new window
Listen to this chapter • 1:04

[1] ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.

[2] ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.

[3] ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.

[4] ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.

[5] ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.

[6] ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.

[7] ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಕೀರ್ತನೆಗಳು — Chapters