Skip to content
Opens in a new window
Listen to this chapter • 1:36

[1] ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.

[2] ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.

[3] ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,

[4] ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?

[5] ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.

[6] ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:

[7] ಎಲ್ಲಾ ಕುರಿದನಗಳನ್ನೂ ಅಡವಿಯ ಮೃಗಗಳನ್ನೂ

[8] ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.

[9] ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!

ಕೀರ್ತನೆಗಳು — Chapters