Skip to content
Opens in a new window
Listen to this chapter • 1:03

[1] ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.

[2] ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.

[3] ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,

[4] “ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”

[5] ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.

[6] ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.

[7] “ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.

ಕೀರ್ತನೆಗಳು — Chapters