Skip to content
Opens in a new window
Listen to this chapter • 4:26

[1] ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

[2] ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.

[3] ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.

[4] ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

[5] ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

[6] ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

[7] ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,

[8] ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,

[9] ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,

[10] ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

[11] ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,

[12] ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,

[13] ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,

[14] ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

[15] ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,

[16] ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,

[17] ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,

[18] ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.

[19] ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.

[20] ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.

[21] ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,

[22] ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.

[23] ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,

[24] ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,

[25] ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.

[26] ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.

[27] ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.

[28] ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.

[29] ಕೀಷನಿಂದ ಯೆರಹ್ಮೇಲನು ಹುಟ್ಟಿದನು.

[30] ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.

[31] ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.

1 ಪೂರ್ವಕಾಲವೃತ್ತಾಂತ — Chapters