Skip to content
Opens in a new window
Listen to this chapter • 7:28

[1] ಯೆಹೂದನ ಸಂತಾನದವರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.

[2] ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು.

[3] ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ.

[4] ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.

[5] ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯರಿದ್ದರು.

[6] ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು.

[7] ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.

[8] ಕೋಚನಿಂದ ಅನೂಬ್‌ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.

[9] ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.

[10] ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

[11] ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ.

[12] ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.

[13] ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.

[14] ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.

[15] ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್‌.

[16] ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.

[17] ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.

[18] ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.

[19] ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.

[20] ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್.

[21] ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,

[22] ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)

[23] ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.

[24] ಸಿಮೆಯೋನನ ಮಕ್ಕಳು: ನೆಮೂವೇಲ್, ಯಾಮೀನ್, ಯಾರೀಬ್, ಜೆರಹ ಮತ್ತು ಸೌಲ.

[25] ಸೌಲನ ಮಗ ಶಲ್ಲುಮ್. ಇವನ ಮಗ ಮಿಬ್ಸಾಮ್. ಮಿಬ್ಸಾಮನ ಮಗ ಮಿಷ್ಮ.

[26] ಮಿಷ್ಮಾನ ಸಂತಾನದವರು: ಇವನ ಮಗ ಹಮ್ಮೂವೇಲ್, ಇವನ ಮೊಮ್ಮಗ ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ.

[27] ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.

[28] ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,

[29] ಬಿಲ್ಹ, ಎಚೆಮ್, ತೋಲಾದ್,

[30] ಬೆತೂವೇಲ್, ಹೊರ್ಮ, ಚಿಕ್ಲಗ್,

[31] ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್.

[32] ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.

[33] ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.

[34] ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,

[35] ಯೋವೇಲ್, ಯೊಷಿಬ್ಯನ ಮಗನೂ, ಸೆರಾಯನ ಮೊಮ್ಮಗನೂ, ಅಸಿಯೇಲನ ಮರಿಮಗನೂ ಆಗಿರುವ ಯೇಹೂ,

[36] ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು

[37] ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.

[38] ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು.

[39] ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.

[40] ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.

[41] ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.

[42] ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.

[43] ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.

1 ಪೂರ್ವಕಾಲವೃತ್ತಾಂತ — Chapters