Skip to content
Opens in a new window
Listen to this chapter • 9:56

[1] ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.

[2] ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.

[3] ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

[4] ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;

[5] ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀಯನು ಉಜ್ಜೀಯನನ್ನು ಪಡೆದನು.

[6] ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತನನ್ನು ಪಡೆದನು.

[7] ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.

[8] ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.

[9] ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು.

[10] ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ.

[11] ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.

[12] ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು.

[13] ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.

[14] ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.

[15] ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.

[16] ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.

[17] ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.

[18] ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.

[19] ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.

[20] ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,

[21] ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ರೈ.

[22] ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,

[23] ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್.

[24] ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್.

[25] ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು.

[26] ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್.

[27] ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್.

[28] ಸಮುವೇಲನ ಮಕ್ಕಳು ಯೋವೇಲ್ ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು.

[29] ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ.

[30] ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.

[31] ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.

[32] ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.

[33] ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.

[34] ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.

[35] ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ.

[36] ಎಲ್ಕಾನನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ,

[37] ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.

[38] ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.

[39] ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.

[40] ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ.

[41] ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು.

[42] ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ.

[43] ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.

[44] ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.

[45] ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ.

[46] ಹಿಲ್ಕೀಯನು ಅಮ್ಚೀಯನ ಮಗ, ಇವನು ಬಾನೀಯನ ಮಗ, ಬಾನೀಯು ಶೆಮೆರನ ಮಗ.

[47] ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.

[48] ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.

[49] ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.

[50] ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.

[51] ಅಬೀಷೂವನ ಮಗ ಬುಕ್ಕೀ, ಬುಕ್ಕೀಯ ಮಗ ಉಜ್ಜೀ, ಇವನ ಮಗ ಜೆರಹ್ಯಾಹ, ಇವನ ಮಗ ಮೆರಾಯೋತ್.

[52] ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್.

[53] ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್.

[54] ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.

[55] ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು.

[56] ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.

[57] ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು, ಲಿಬ್ನ ಮತ್ತು ಅದರ ಗೋಮಾಳಗಳು, ಯತ್ತೀರ್, ಎಷ್ಟೆಮೋವ, ಅವುಗಳ ಉಪನಗರಗಳೂ,

[58] ಹೀಲೇನ್, ದೆಬೀರ್

[59] ಆಷಾನ್, ಬೇತ್‌ಷೆಮೆಷ್‌ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ,

[60] ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.

[61] ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.

[62] ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.

[63] ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.

[64] ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.

[65] ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು.

[66] ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ

[67] ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,

[68] ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು,

[69] ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು.

[70] ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.

[71] ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.

[72] ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,

[73] ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.

[74] ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್.

[75] ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.

[76] ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.

[77] ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,

[78] ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.

[79] ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.

[80] ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್,

[81] ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.

1 ಪೂರ್ವಕಾಲವೃತ್ತಾಂತ — Chapters