Skip to content
Opens in a new window
Listen to this chapter • 4:21

[1] ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,

[2] ನೋಹ ನಾಲ್ಕನೆಯವನು, ರಾಫ ಐದನೆಯವನು.

[3] ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,

[4] ಅಬೀಷೂವ, ನಾಮಾನ್, ಅಹೋಹ,

[5] ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.

[6] ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.

[7] ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.

[8] ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,

[9] ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.

[10] ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.

[11] ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.

[12] ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.

[13] ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.

[14] ಅಹಿಯೋ, ಶಾಷಕ್, ಯೆರೇಮೋತ್,

[15] ಜೆಬದ್ಯ, ಅರಾದ್, ಎದೆರ್,

[16] ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.

[17] ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,

[18] ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.

[19] ಯಾಕೀಮ್, ಜಿಕ್ರೀ, ಜಬ್ದೀ,

[20] ಎಲೀಗೇನೈ, ಚಿಲ್ಲೆತೈ, ಎಲೀಯೇಲ್,

[21] ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.

[22] ಇಷ್ಪಾನ್, ಏಬೆರ್, ಎಲೀಯೇಲ್,

[23] ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,

[25] ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.

[26] ಶಂಷೆರೈ, ಶೆಹರ್ಯ, ಅತಲ್ಯ,

[27] ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.

[28] ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.

[29] ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.

[30] ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,

[31] ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.

[32] ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.

[33] ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.

[34] ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.

[35] ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.

[36] ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.

[37] ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.

[38] ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

[39] ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.

[40] ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.

1 ಪೂರ್ವಕಾಲವೃತ್ತಾಂತ — Chapters