Skip to content
Opens in a new window
Listen to this chapter • 1:10

[1] ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

[2] ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”

[3] ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

[4] ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

[5] ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

[6] ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಯೆಶಾಯನು — Chapters