Skip to content
Opens in a new window
Listen to this chapter • 0:46

[1] ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,

[2] “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.

[3] ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?

[4] ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

[5] ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.

[6] ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”

ಯೋಬನು — Chapters