Skip to content
Opens in a new window
Listen to this chapter • 7:23

[1] ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.

[2] ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ

[3] ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,

[4] ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.

[5] ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ

[6] ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,

[7] ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ

[8] ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.

[9] ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.

[10] ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು

[11] ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.

[12] ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.

[13] ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

[14] ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.

[15] ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.

[16] ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.

[17] ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.

[18] ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು

[19] ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

[20] ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:

[21] ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,

[22] ಕೀನಾ, ದೀಮೋನ್, ಅದಾದ್,

[23] ಕೆದೆಷ್, ಹಾಚೋರ್, ಇತ್ನಾನ್,

[24] ಜೀಫ್, ಟೆಲೆಮ್, ಬೆಯಾಲೋತ್,

[25] ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,

[26] ಅಮಾಮ್, ಶೆಮ, ಮೋಲಾದಾ,

[27] ಹಚರ್ ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,

[28] ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,

[29] ಬಾಲಾ, ಇಯ್ಯೀಮ್, ಎಚೆಮ್,

[30] ಎಲ್ಟೋಲದ್, ಕೆಸೀಲ್, ಹೊರ್ಮಾ,

[31] ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,

[32] ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,

[33] ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ

[34] ಜನೋಹ, ಏಂಗನ್ನೀಮ್,

[35] ತಪ್ಪೂಹ, ಏನಾಮ್, ಯರ್ಮೂತ್,

[36] ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

[37] ಚೆನಾನ್, ಹದಾಷಾ, ಮಿಗ್ದಲ್ಗಾದ್,

[38] ದಿಲಾನ್, ಮಿಚ್ಪೆ, ಯೊಕ್ತೇಲ್,

[39] ಲಾಕೀಷ್, ಬೊಚ್ಕತ್, ಎಗ್ಲೋನ್,

[40] ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ,

[41] ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.

[42] ಲಿಬ್ನಾ, ಎತೆರ್, ಆಷಾನ್,

[43] ಇಪ್ತಾಹ,

[44] ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

[45] ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.

[46] ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;

[47] ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.

[48] ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,

[49] ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,

[50] ಅನಾಬ್, ಎಷ್ಟೆಮೋ, ಅನೀಮ್,

[51] ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

[52] ಅರಬ್, ದೂಮಾ, ಎಷಾನ್,

[53] ಯಾನೂಮ್, ಬೇತ್ ತಪ್ಪೂಹ, ಅಫೇಕಾ,

[54] ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.

[55] ಮಾವೋನ್,

[56] ಕರ್ಮೆಲ್, ಜೀಫ್, ಯುಟ್ಟಾ,

[57] ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

[58] ಹಲ್ಹೂಲ್, ಬೇತ್‌ಚೂರ್, ಗೆದೋರ್,

[59] ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.

[60] ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.

[61] ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,

[62] ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.

[63] ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.

ಯೆಹೋಶುವನು — Chapters