[1] ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.
[2] ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.
[3] ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
[4] ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.
[5] ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.
[6] ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.
[7] ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
[8] ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.
[9] ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.
[10] ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,
[11] ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.
[12] ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.
[13] ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.
[14] ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.
[15] ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.
[16] ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,
[17] ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,
[18] ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.
[19] ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.
[20] ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
[21] ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.
[22] ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.
[23] ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.
[24] ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.
[25] ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
[26] ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
[27] ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,
[28] ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,
[29] ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,
[30] ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.
[31] ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.
[32] ಅನಾತೋತ್, ನೋಬ್, ಅನನ್ಯ,
[33] ಹಾಚೋರ್, ರಾಮಾ, ಗಿತ್ತಯಿಮ್,
[34] ಹಾದೀದ್, ಚೆಬೋಯಿಮ್, ನೆಬಲ್ಲಾಟ್,
[35] ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.
[36] ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.