Skip to content
Opens in a new window
Listen to this chapter • 8:38

[1] ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,

[2] ಅಮರ್ಯ, ಮಲ್ಲೂಕ್, ಹಟ್ಟೂಷ್,

[3] ಶೆಕನ್ಯ, ರೆಹುಮ್, ಮೆರೇಮೋತ್,

[4] ಇದ್ದೋ, ಗಿನ್ನೆತೋನ್, ಅಬೀಯ,

[5] ಮಿಯ್ಯಾಮೀನ್, ಮಾದ್ಯ, ಬಿಲ್ಗ,

[6] ಶೆಮಾಯ, ಯೋಯಾರೀಬ್, ಯೆದಾಯ,

[7] ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

[8] ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.

[9] ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.

[10] ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,

[11] ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು.

[12] ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,

[13] ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,

[14] ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್,

[15] ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ,

[16] ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಲಾಮ್,

[17] ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ,

[18] ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,

[19] ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ,

[20] ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,

[21] ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.

[22] ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.

[23] ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.

[24] ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

[25] ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

[26] ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.

[27] ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

[28] ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,

[29] ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.

[30] ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.

[31] ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

[32] ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,

[33] ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್,

[34] ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ

[35] ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ

[36] ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.

[37] ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.

[38] ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ

[39] ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

[40] ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ

[41] ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ

[42] ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.

[43] ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

[44] ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

[45] ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.

[46] ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

[47] ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ನೆಹೆಮೀಯನು — Chapters