[1] ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.
[2] ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.
[3] ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.
[4] ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
[5] ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,
[6] ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.
[7] ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:
[8] ಪರೋಷಿನವರು - 2,172.
[9] ಶೆಫಟ್ಯನ ಸಂತಾನದವರು - 372.
[10] ಆರಹನ ಸಂತಾನದವರು - 652.
[11] ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.
[12] ಏಲಾಮಿನ ಸಂತಾನದವರು - 1,254.
[13] ಜತ್ತೂವಿನ ಸಂತಾನದವರು - 845.
[14] ಜಕ್ಕೈಯನ ಸಂತಾನದವರು - 760.
[15] ಬಿನ್ನೂಯನ ಸಂತಾನದವರು - 648.
[16] ಬೇಬೈಯನ ಸಂತಾನದವರು - 628.
[17] ಅಜ್ಗಾದಿನ ಸಂತಾನದವರು - 2,322.
[18] ಅದೋನೀಕಾಮಿನ ಸಂತಾನದವರು - 667.
[19] ಬಿಗ್ವೈಯನ ಸಂತಾನದವರು - 2,067.
[20] ಆದೀನನ ಸಂತಾನದವರು - 655.
[21] ಆಟೇರಿನವರಾದ ಹಿಜ್ಕೀಯನ ಸಂತಾನದವರು - 98.
[22] ಹಾಷುಮಿನ ಸಂತಾನದವರು - 328.
[23] ಬೇಚೈಯನ ಸಂತಾನದವರು - 324.
[24] ಹಾರಿಫಿನ ಸಂತಾನದವರು - 112.
[25] ಗಿಬ್ಯೋನಿನ ಸಂತಾನದವರು - 95.
[26] ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188.
[27] ಅನಾತೋತ್ ಊರಿನವರು - 128.
[28] ಬೇತಜ್ಮಾವೇತಿನ ಊರಿನವರು - 42.
[29] ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743.
[30] ರಾಮಾ ಮತ್ತು ಗೆಬ ಊರಿನವರು - 621.
[31] ಮಿಕ್ಮಾಸಿನವರು - 122.
[32] ಬೇತೇಲ್ ಮತ್ತು ಆಯಿ ಎಂಬ ಊರಿನವರು - 123.
[33] ಎರಡನೆಯ ನೆಬೋವಿನವರು - 52.
[34] ಎರಡನೆಯ ಏಲಾಮಿನವರು - 1,254.
[35] ಹಾರಿಮನವರು - 320.
[36] ಯೆರಿಕೋವಿನವರು - 347.
[37] ಲೋದ್, ಹಾದೀದ್, ಮತ್ತು ಓನೋ ಊರಿನವರು - 721.
[38] ಸೆನಾಹನವರು - 3,930.
[39] ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973.
[40] ಇಮ್ಮೇರನ ಸಂತಾನದವರು - 1,052.
[41] ಪಷ್ಹೂರನ ಸಂತಾನದವರು - 1,247.
[42] ಹಾರಿಮನ ಸಂತಾನದವರು - 1,017
[43] ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.
[44] ಗಾಯಕರಲ್ಲಿ; ಆಸಾಫನ ಸಂತಾನದರು - 148.
[45] ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138.
[46] ದೇವಾಲಯದ ಸೇವಕರಲ್ಲಿ; ಜೀಹ, ಹಸೂಫ, ಟಬ್ಬಾವೋತ್ ಸಂತಾನದರು,
[47] ಕೇರೋಸ್, ಸೀಯ, ಪಾದೋನ್ ಸಂತಾನದರು,
[48] ಲೆಬಾನ, ಹಗಾಬ, ಸಲ್ಮೈ ಸಂತಾನದರು,
[49] ಹಾನಾನ್, ಗಿದ್ದೇಲ್, ಗಹರ್ ಸಂತಾನದರು,
[50] ರೆವಾಯ, ರೆಚೀನ್, ನೆಕೋದ ಸಂತಾನದರು,
[51] ಗಜ್ಜಾಮ್, ಉಜ್ಜ, ಪಾಸೇಹ ಸಂತಾನದವರು,
[52] ಬೇಸೈ, ಮೆಯನೀಮ್, ನೆಫೀಷೆಸೀಮ್ ಸಂತಾನದವರು,
[53] ಬಕ್ಬೂಕ್, ಹಕ್ಕೂಫ, ಹರ್ಹೂರ್ ಸಂತಾನದವರು,
[54] ಬಚ್ಲೂತ್, ಮೆಹೀದ, ಹರ್ಷ ಸಂತಾನದವರು
[55] ಬರ್ಕೋಸ್, ಸೀಸೆರ, ತೆಮಹ ಸಂತಾನದವರು,
[56] ನೆಚೀಹ, ಹಟೀಫ ಸಂತಾನದವರು.
[57] ಸೊಲೊಮೋನನ ಸೇವಕರಲ್ಲಿ - ಸೋಟೈ, ಸೋಫೆರೆತ್, ಪೆರೀದನ ಸಂತಾನದವರು,
[58] ಯಾಲ, ದರ್ಕೋನ್, ಗಿದ್ದೇಲ್ ಸಂತಾನದವರು,
[59] ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಸಂತಾನದವರು.
[60] ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ.
[61] ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,
[62] ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642.
[63] ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.
[64] ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.
[65] ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.
[66] ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು.
[67] ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ.
[68] ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,
[69] ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.
[70] ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
[71] ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;
[72] ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.
[73] ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.