Skip to content
Opens in a new window
Listen to this chapter • 2:42

[1] ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,

[2] ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

[3] “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

[4] ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.

[5] ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

[6] “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,

[7] ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.

[8] ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

[9] “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.

[10] “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,

[11] ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.

[12] ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.

[13] ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.

[14] ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.

[15] ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”

[16] ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.

ಅರಣ್ಯಕಾಂಡ — Chapters