Skip to content
Opens in a new window
Listen to this chapter • 2:08

[1] ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

[2] ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.

[3] ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

[4] ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,

[5] ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.

[6] ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

[7] ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

[8] ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.

[9] ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

[10] ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.

[11] ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.

[12] ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.

[13] ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.

[14] ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,

[15] ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,

[16] “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,

[17] “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

[18] ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

ಜ್ಞಾನೋಕ್ತಿಗಳು — Chapters