Skip to content
Opens in a new window
Listen to this chapter • 0:56

[1] ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

[2] ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.

[3] ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

[4] ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.

[5] ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.

[6] ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಕೀರ್ತನೆಗಳು — Chapters