Skip to content
Opens in a new window
Listen to this chapter • 1:08

[1] ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

[2] ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

[3] ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

[4] ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.

[5] ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

[6] ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

[7] ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

[8] ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಕೀರ್ತನೆಗಳು — Chapters