Skip to content
Opens in a new window
Listen to this chapter • 0:57

[1] ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.

[2] ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.

[3] ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.

[4] ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.

[5] ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,

[6] ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.

[7] ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

[8] ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.

[9] ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

ಕೀರ್ತನೆಗಳು — Chapters