Skip to content
Opens in a new window
Listen to this chapter • 0:56

[1] ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,

[2] ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು.

[3] ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.

[4] ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.

[5] ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?

[6] ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?

[7] ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.

[8] ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

ಕೀರ್ತನೆಗಳು — Chapters