Skip to content
Opens in a new window
Listen to this chapter • 1:22

[1] ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

[2] ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

[3] ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

[4] ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

[5] ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

[6] ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

[7] ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

[8] ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

ಕೀರ್ತನೆಗಳು — Chapters