Skip to content
Opens in a new window
Listen to this chapter • 0:52

[1] ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

[2] ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.

[3] ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

[4] ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.

[5] ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.

[6] ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.

[7] ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

[8] ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

ಕೀರ್ತನೆಗಳು — Chapters