Skip to content
Opens in a new window
Listen to this chapter • 0:55

[1] “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.

[2] ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,

[3] “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

[4] ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;

[5] ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.”

[6] ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.

[7] ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

[8] ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

ಕೀರ್ತನೆಗಳು — Chapters