Skip to content
Opens in a new window
Listen to this chapter • 0:47

[1] ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

[2] ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

[3] ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

[4] ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.

[5] ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಕೀರ್ತನೆಗಳು — Chapters