Skip to content
Opens in a new window
Listen to this chapter • 0:53

[1] ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.

[2] ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

[3] ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

[4] ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.

[5] ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,

[6] ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

ಕೀರ್ತನೆಗಳು — Chapters