Skip to content
Opens in a new window
Listen to this chapter • 0:58

[1] “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.

[2] “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.

[3] ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.”

[4] ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.

[5] ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.

[6] ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;

[7] ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

[8] ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

ಕೀರ್ತನೆಗಳು — Chapters