Skip to content
Opens in a new window
Listen to this chapter • 0:52

[1] ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

[2] ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

[3] ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.

[4] ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

[5] ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ಕೀರ್ತನೆಗಳು — Chapters