Skip to content
Opens in a new window
Listen to this chapter • 0:56

[1] ಯೆಹೋವನು ನನಗೆ ಕುರುಬನು; ಕೊರತೆಪಡೆನು.

[2] ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

[3] ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

[4] ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

[5] ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

[6] ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಕೀರ್ತನೆಗಳು — Chapters